ಉಚಿತ ಹೊಲಿಗೆ ಯಂತ್ರ ಸೇರಿದಂತೆ 10 ಸಬ್ಸಿಡಿ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ರಾಜ್ಯದಲ್ಲಿ ವಿವಿಧ ವರ್ಗದಲ್ಲಿ ಹಿಂದುಳಿದ ಜನರಿಗೆ ಅರ್ಥಿಕವಾಗಿ ನೆರವಾಗಲು ನಿಗಮ ಮಂಡಳಿಗಳ ಮೂಲಕ ಪ್ರತಿ ವರ್ಷ ಅಭಿವೃದ್ದಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತದೆ.
ಇದರಂತೆ ಈ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆಯಲು ಈ ಹಿಂದೆ ನಿಗದಿಪಡಿಸಿದ ಕೊನೆಯ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ. ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ.
ಉಚಿತ ಹೊಲಿಗೆ ಯಂತ್ರ (Free Sewing Machine)ಸೇರಿದಂತೆ 10 ಸಬ್ಸಿಡಿ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿ
- ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ
- ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ
- ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮ
- ಕರ್ನಾಟಕ ಉಪ್ಪಾರ ಲಿಂಗಾಯತ ಅಭಿವೃದ್ದಿ ನಿಗಮ
- ಕರ್ನಾಟಕ ವೀರಶೈವ ಅಲೆಮಾರಿ ಅಭಿವೃದ್ದಿ ನಿಗಮ.
- ಕರ್ನಾಟಕ ಮಡಿವಾಳ ಮಾಚೀದೇವಾ ಅಭಿವೃದ್ದಿ ನಿಗಮ
- ಕರ್ನಾಟಕ ಸವಿತಾ ಸಮಾಜ ಅಭಿವೃದ್ದಿ ನಿಗಮ.
- ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ದಿ ನಿಗಮ.
- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮ
- ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮ.
ಅರ್ಹತೆಗಳು:
ಅರ್ಜಿ ಸಲ್ಲಿಸುವ ದಿನಾಂಕದಂದು ಕನಿಷ್ಠ 18 ವರ್ಷ ಪೂರ್ಣಗೊಂಡಿರಬೇಕು.
ಅರ್ಜಿದಾರ ತನ್ನ ಸಾಂಪ್ರದಾಯಿಕ ಅಸಂಘಟಿತ ಸ್ವಯಂ ಉದ್ಯೋಗ (Tailor-Darzi) ದಲ್ಲಿ ತೊಡಗಿಕೊಂಡಿರಬೇಕು.
ಒಂದು ಕುಟುಂಬದ ಒಬ್ಬರಿಗೆ ಮಾತ್ರ ಈ ಯೋಜನೆಯ ಲಾಭ ಸಿಗಲಿದೆ.
ಅರ್ಜಿ ಸಲ್ಲಿಸುವ ಸಮಯದಲ್ಲಿ ಅರ್ಜಿದಾರ ಕಳೆದ 5 ವರ್ಷಗಳಲ್ಲಿ ಕೇಂದ್ರ ಸರ್ಕಾರದಿಂದ ಅಥವಾ ರಾಜ್ಯ ಸರ್ಕಾರದಿಂದ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆದಿರಬಾರದು.
ಈ ಯೋಜನೆಯು ಸರ್ಕಾರಿ ನೌರಕರಿಗೆ ಮತ್ತು ಅವರ ಕುಟುಂಬದವರಿಗೆ ಸಿಗುವುದಿಲ್ಲ.
ಬೇಕಾಗುವ ದಾಖಲೆಗಳು:
ಆಧಾರ ಕಾರ್ಡ್
ರೇಷನ್ ಕಾರ್ಡ್ ಕಡ್ಡಾಯ
ಮೊಬೈಲ್ ಸಂಖ್ಯೆ
ಬ್ಯಾಂಕ್ ಖಾತೆ ವಿವರ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
ಈ ಮೊದಲು ಮೇಲೆ ತಿಳಿಸಿರುವ ನಿಗಮ ಯೋಜನೆಗಳಿಗೆ ಅರ್ಜಿ ಸಲ್ಲಿಸಲು 31 ಆಗಸ್ಟ್ 2024 ಕೊನೆಯ ದಿನಾಂಕ ಎಂದು ನಿಗದಿಪಡಿಸಲಾಗಿತ್ತು ಇನ್ನು ಹಲವು ಅರ್ಹ ಅರ್ಜಿದಾರರು ಅರ್ಜಿ ಸಲ್ಲಿಸುವುದು ಬಾಕಿಯಿರುವ ಕಾರಣ ಈಗ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 15 ಸೆಪ್ಟೆಂಬರ್ 2024ಗೆ ಮುಂದೂಡಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ ಮಾಹಿತಿ:
ಅರ್ಹ ಆಸಕ್ತ ಸಾರ್ವಜನಿಕರು ಕೊನೆಯ ದಿನಾಂಕದ ಒಳಗಾಗಿ ಸಲ್ಲಿಕೆ ಮಾಡಬೇಕಾದ ದಾಖಲೆಗಳ ಸಮೇತ ನಿಮ್ಮ ಹತ್ತಿರದ ಗ್ರಾಮ ಒನ್/ಕರ್ನಾಟಕ ಒನ್/ಬೆಂಗಳೂರು ಒನ್/ಕಂಪ್ಯೂಟರ್ ಸೆಂಟರ್ ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು